ಮೈಸೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರು ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 2022ರಲ್ಲಿ ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಬಾಬು ಥಾಮಸ್, ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಿ ಬಳಿಕ ಕಾರಿನಿಂದ ಗುದ್ದಿದ್ದ. ರಭಸಕ್ಕೆ ಚಂದ್ರಶೇಖರ್ ಕಾರಿನ ಬ್ಯಾನೆಟ್ ಮೇಲೆ ಬಿದ್ದರೂ, ಆತನನ್ನು ರಕ್ಷಿಸದೆ ಕೊಲೆ ಉದ್ದೇಶದಿಂದ ಸುಮಾರು 800 ಮೀಟರ್ ದೂರ ಅಪಾಯಕಾರಿಯಾಗಿ ಕಾರು ಚಲಾಯಿಸಿ ಕೆಳಗೆ ಬೀಳಿಸಿದ್ದ. ಪ್ರಕರಣದ ತನಿಖೆ ನಡೆಸಿದ್ದ ಸಬ್‌ಇನ್ಸ್‌ಪೆಕ್ಟರ್ ಜೈಕೀರ್ತಿ ಹಾಗೂ ಸಿಪಿಸಿ ಶಿವಣ್ಣ ಅವರ ತನಿಖೆಯಿಂದ ಆರೋಪ ಸಾಬೀತಾಗಿದೆ. 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್.ಹೆಚ್. ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಅಭಿಯೋಜಕಿ ಸುಧಾ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

