Breaking News

ಬೆಳಗಾವಿಯಲ್ಲಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಪೋಷಕರಿಂದ ಕೊಲೆ ಆರೋಪ!

ಬೆಳಗಾವಿ: ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಗೌತಮ್ ಭಜಂತ್ರಿ ಎಂಬ ಬಾಲಕನ ಮೃತದೇಹ ಶಾಲೆಯ ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಬಾಲಕನ ತಾಯಿ ಲಕ್ಷ್ಮೀಬಾಯಿ ಭಜಂತ್ರಿ ಅವರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಶಾಲೆಯ ಆವರಣದಲ್ಲೇ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಕಿಟಕಿಗೆ ನೇಣು ಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಪುಂಡರ ಹಾವಳಿ: ಗಾಂಜಾ ಮತ್ತಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಡೆಲಿವರಿ ಬಾಯ್‌ ಮೇಲೆ ಆರೇಳು ಮಂದಿ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. …

Leave a Reply

Your email address will not be published. Required fields are marked *