Breaking News

ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ- ಪಕ್ಕದಲ್ಲಿದ್ದ ಕಾರು, ಸ್ಕೂಟರ್‌ಗೂ ತಗುಲಿದ ಬೆಂಕಿ

ಉಡುಪಿ: ಪೆರಂಪಳ್ಳಿ ಸಮೀಪ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ಸ್ಥಳಕ್ಕೆ ಧಾವಿಸಿ, ಬೆಂಕಿಯ ನಡುವೆಯೇ ಕಾರನ್ನು ಸುರಕ್ಷಿತವಾಗಿ ಹೊರತೆಗೆದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬಳಿಕ ನೀರು ಹಾಗೂ ಮಣ್ಣು ಬಳಸಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಯುವಕರ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಬೆಂಕಿ ಮನೆಯ ಇತರ ಭಾಗಗಳಿಗೆ ವ್ಯಾಪಿಸುವುದು ತಪ್ಪಿದ್ದು, ಸ್ಥಳೀಯರು ಇಬ್ಬರ ಕಾರ್ಯವನ್ನು ಶ್ಲಾಘಿಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *