ಪುತ್ತೂರು: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡುವ ಸಲುವಾಗಿ ರವಿವಾರ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ಅದ್ದು ಪಡೀಲ್ ಎಂಬಾತ ದಾರಿ ಮಧ್ಯೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಯು ತನ್ನ ದ್ವಿಚಕ್ರ ವಾಹನದಲ್ಲಿ ಬಾಲಕಿಯನ್ನು ಕರೆದೊಯ್ಯುತ್ತಾ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿಯ ತಾಯಿಯು ನೀಡಿದ ದೂರಿನಂತೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆ.75, ಬಿಎನ್‌ಎಸ್ 2023 ಮತ್ತು ಸೆ.8, 12 ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
