Breaking News

ಪೊಲೀಸರಿಂದ ತಪ್ಪಿಸಿಕೊಂಡಿದ್ದ ರೌಡಿಶೀಟರ್ ಶವವಾಗಿ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದೊಡ್ಡೇರಿ ಗ್ರಾಮದ ಬಳಿ ಪೊಲೀಸರಿಂದ ಪರಾರಿಯಾಗಿದ್ದ ರೌಡಿಶೀಟರ್ ಜಯಂತ್ ಶವ ಕೆರೆಯಲ್ಲಿ ಪತ್ತೆಯಾಗಿದೆ. 22 ಪ್ರಕರಣಗಳಲ್ಲಿ ಬೇಕಾಗಿದ್ದ ಜಯಂತ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಕುಲುವನಹಳ್ಳಿಯಲ್ಲಿ ವೃದ್ಧೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದ ಜಯಂತ್ ಹಾಗೂ ಯತೀಶ್‌ನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಇಬ್ಬರು ಪ್ರಜ್ಞೆ ತಪ್ಪಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದಾಗ ಆಂಬುಲೆನ್ಸ್ ಚಾಲಕನನ್ನು ತಳ್ಳಿ ಇಬ್ಬರೂ ಪರಾರಿಯಾಗಿದ್ದರು. ಪರಾರಿಯಾಗಿದ್ದ ಜಯಂತ್ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಪೊಲೀಸರು ಮತ್ತೋರ್ವ ಆರೋಪಿ ಯತೀಶ್‌ಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *