Breaking News

ಮುದಗಲ್‌ನಲ್ಲಿ ಮರಳು ಅಕ್ರಮ ಸಾಗಣೆ: ಟಿಪ್ಪರ್‌ಗೆ ₹45,400 ದಂಡ

ಮುದಗಲ್‌ನಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಟಿಪ್ಪರ್ ಮಾಲೀಕ ಬಸವರಾಜಗೆ ₹45,400 ದಂಡ ವಿಧಿಸಲಾಗಿದೆ. ಅಧಿಕಾರಿ ಸನೀತ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಕ್ರಮ ಸಾಗಣೆ ಕುರಿತು ಆರ್‌ಟಿಒ ಅಧಿಕಾರಿಗಳ ಗಮನಕ್ಕೂ ತರಲಾಗುವುದು ಎಂದು ತಿಳಿಸಿದ್ದಾರೆ. ಪಟ್ಟಣದ ಮೂಲಕ ನೆರೆ ಜಿಲ್ಲೆಗಳಿಗೆ ಕಲ್ಲು ಅಕ್ರಮವಾಗಿ ಸಾಗಿಸುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಅಕ್ರಮ ಮರಳು ಹಾಗೂ ಕಲ್ಲು ಸಾಗಣೆಗೆ ಕಡಿವಾಣ ಹಾಕಲು ನಿರಂತರ ತಪಾಸಣೆ ಮತ್ತು ಕಾನೂನು ಕ್ರಮ ಮುಂದುವರಿಸುವುದಾಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *