Breaking News

ಕುರಿ ಕೊಂದ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ: ಓರ್ವ ಮಹಿಳೆ ಸಾವು

ಕೋಲಾರ: ಕುರಿ ಸಾವಿನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ 65 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪಚ್ಚಾರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೆಂಕಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಕುರಿ ಸಾವಿನ ವಿಚಾರವಾಗಿ ವೆಂಕಟಲಕ್ಷ್ಮಮ್ಮ ಹಾಗೂ ಆಂಜಪ್ಪ ಕುಟುಂಬದ ನಡುವೆ ಜಗಳ ನಡೆದಿದ್ದು, ಬಳಿಕ ವೇಮಗಲ್ ಠಾಣೆಯಲ್ಲಿ ರಾಜಿ ಪಂಚಾಯ್ತಿ ನಡೆದಿತ್ತು. ಇದೇ ವೇಳೆ ದೂರು ನೀಡಿದ್ದ ಗಂಗರಾಜು ಎಂಬ ಯುವಕನಿಗೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ರಾತ್ರಿ ಮತ್ತೆ ಎರಡೂ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ವೆಂಕಟಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಅವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಆಂಜಪ್ಪ, ಮಂಜುನಾಥ್, ವೆಂಕಟೇಶ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *