ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಸಾರ್ವಜನಿಕರು ಓಡಾಡಲು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಭಾನುವಾರ ತಡರಾತ್ರಿ ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಐದಾರು ಮಂದಿ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಒಂದೇ ಬೈಕ್‌ನಲ್ಲಿ ಬಂದ ನಾಲ್ಕೈದು ಮಂದಿ, ಡೆಲಿವರಿ ಬಾಯ್‌ನನ್ನು ಅಡ್ಡಗಟ್ಟಿ ಮನಬಂದಂತೆ ಥಳಿಸಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ಭಾಗದಲ್ಲಿ ದಾರಿಹೋಕರನ್ನು ತಡೆದು ಹಲ್ಲೆ ಹಾಗೂ ದರೋಡೆ ನಡೆಸುವ ಘಟನೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಿ ಪುಂಡರ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

