Breaking News

ಮಿಮ್ಸ್ ಆಸ್ಪತ್ರೆ ಮೇಲೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ದಾಳಿ: ಯುವತಿಯೊಂದಿಗೆ ಸಿಕ್ಕಿ ಬಿದ್ದ ಜೈಲಿನಲ್ಲಿರಬೇಕಾದ ಭೂ ದಾಖಲೆಗಳ ಆರೋಪಿ

ಮಂಡ್ಯ: ಜೈಲಿನಲ್ಲಿರಬೇಕಿದ್ದ ಭೂ ದಾಖಲೆ ಪ್ರಕರಣದ ಆರೋಪಿ ಮೊಹಮ್ಮದ್ ಹುಸೇನ್ ಮಿಮ್ಸ್ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ಯುವತಿಯೊಂದಿಗೆ ಪತ್ತೆಯಾಗಿರುವ ಘಟನೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಮಿ ವರ್ಗಾವಣೆ ಮಾಡಿದ ಆರೋಪದಲ್ಲಿ ಲೋಕಾಯುಕ್ತರಿಂದ ಬಂಧಿತನಾಗಿದ್ದ ಹುಸೇನ್ ಜೈಲಿನಲ್ಲಿರಬೇಕಿತ್ತು. ಆದರೆ ಗಂಭೀರ ಕಾಯಿಲೆ ಇಲ್ಲದಿದ್ದರೂ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಪತ್ತೆಯಾಗಿದ್ದು, ಜೊತೆಗೆ ಯುವತಿಯೊಬ್ಬಳು ಆತನೊಂದಿಗೆ ಇರುವುದನ್ನು ಕಂಡು ನ್ಯಾಯಾಧೀಶರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿರುವ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತರದಿರುವುದಕ್ಕೂ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ಜೈಲಾಧಿಕಾರಿ ಹಾಗೂ ವೈದ್ಯಾಧಿಕಾರಿಗಳಿಂದ ವರದಿ ಕೇಳಿದ್ದು, ತಪ್ಪು ಕಂಡುಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *