ಶಿವಮೊಗ್ಗ: ಪ್ರೀತಿ-ಪ್ರೇಮದ ಹೆಸರಲ್ಲಿ ಅಪ್ರಾಪ್ತೆಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಫೋಟೋ, ವಿಡಿಯೋ ಇದೆ ಎಂದು ಬೆದರಿಸಿ ಪದೇಪದೆ ಕರೆದೊಯ್ಯುತ್ತಿದ್ದ ಎನ್ನಲಾಗಿದ್ದು, ಕಿರುಕುಳ ತಾಳಲಾರದೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆಗಸ್ಟ್ 18ರಂದು ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಹಾಗೂ ಮಣಿಪಾಲ್‌ಗೆ ಕರೆದೊಯ್ದರೂ, ಆಗಸ್ಟ್ 24ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಸುಮುಖ್ ಎಂಬ ಯುವಕನ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಾಗರ ಗ್ರಾಮಾಂತರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

