Breaking News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಒಂದು ಕೆಜಿ ಚಿನ್ನಾಭರಣ ಕಳ್ಳತನ

ಬೆಂಗಳೂರು: ಯಲಹಂಕದ ಕಟ್ಟಿಗೆನಹಳ್ಳಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿ ಚಂದ್ರಮೌಳಿ ಮನೆಯಲ್ಲಿ ಸುಮಾರು 1 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳಿ ಗ್ಯಾಂಗ್‌ನ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಧೀರೇಂದ್ರ ಪ್ರೇಮ್, ಅಭಿಷೇಕ್, ಅಂಬರೆ ಧಮೈ ಹಾಗೂ ದೀಪಕ್ ಶಾಹಿ ಬಂಧಿತರು. ಮನೆಯಲ್ಲೇ ಕೆಲಸ ಮಾಡುತ್ತಿದ್ದ ಸಂಜಯ್ ಹಾಗೂ ಆತನ ಪತ್ನಿ 6 ತಿಂಗಳಿಂದ ಕಳ್ಳತನಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಆಗಸ್ಟ್ 16ರಂದು ಕುಟುಂಬಸ್ಥರು ತಿಥಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಚಿನ್ನ ಕದ್ದು, ದಂಪತಿ ವಿಮಾನದಲ್ಲಿ ಪರಾರಿಯಾಗಿದ್ದರು. ಫೇಸ್‌ಬುಕ್ ಮೂಲಕ ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು ಎಸ್‌ಎಸ್‌ಬಿಗೆ ಮಾಹಿತಿ ನೀಡಿದ್ದರು. ನೇಪಾಳ ಗಡಿಯಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ₹55 ಲಕ್ಷ ಮೌಲ್ಯದ 360 ಗ್ರಾಂ ಚಿನ್ನ ಹಾಗೂ 960 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಸಂಜಯ್ ಹಾಗೂ ಆತನ ಪತ್ನಿಗಾಗಿ ಶೋಧ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *