ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ಅಭಿಷೇಕ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಸೋಮವಾರ ರಾತ್ರಿ ಗೋವಿಂದ ಮತ್ತು ಅಭಿಷೇಕ್ ನಡುವೆ ಗಲಾಟೆ ನಡೆದಿದ್ದು, ಮಂಗಳವಾರ ಬೆಳಗಿನ ಜಾವ ಗೋವಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ಮಲ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ರೈಲು ನಿಲ್ದಾಣದ ಬಳಿ ಗೋವಿಂದನನ್ನು ವಶಕ್ಕೆ ಪಡೆದಿದ್ದಾರೆ. ಆತ ಹೈದರಾಬಾದ್ ಅಥವಾ ಮುಂಬೈಗೆ ತೆರಳಲು ಮುಂದಾಗಿದ್ದ ಎನ್ನಲಾಗಿದೆ. ಗೋವಿಂದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

