Breaking News

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಬೆದರಿಕೆ’; ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!.

ಆಂಧ್ರ ಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮತಾಂತರಕ್ಕೆ ಒತ್ತಾಯ, ಕೊಲೆ ಬೆದರಿಕೆ ಹಾಗೂ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ ರೈಫಲ್ ಶೂಟಿಂಗ್ ಕೋಚ್ ಶೇಖ್ ಸಾದಿಕ್ ಖಾನ್‌ನನ್ನು ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದಾರೆ. ಆಗಸ್ಟ್ 16-17ರ ಮಧ್ಯರಾತ್ರಿ ಎಂಜಿನಿಯರ್ ತಿಲ್ಲಪುಡಿ ನೂಕರಾಜು, ಪತ್ನಿ ಮೀನಾ, ಮಗಳು ಸೌಜನ್ಯ ಹಾಗೂ ಮೊಮ್ಮಗ ಸೇತುವೆಯಿಂದ ನದಿಗೆ ಹಾರಿದ್ದರು. ಮೀನುಗಾರರ ರಕ್ಷಣಾ ಕಾರ್ಯಾಚರಣೆಯಲ್ಲಿ ಮೊಮ್ಮಗ ಪಾರಾಗಿದ್ದು, ಮೂವರು ಮೃತಪಟ್ಟಿದ್ದರು. ನೂಕರಾಜು ಬರೆದಿದ್ದ ಡೆತ್‌ನೋಟ್‌ನಲ್ಲಿ ಖಾನ್ ವಿರುದ್ಧ ಗಂಭೀರ ಆರೋಪಗಳಿದ್ದವು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಖಾನ್‌ನನ್ನು 10ಕ್ಕೂ ಹೆಚ್ಚು ಪೊಲೀಸ್ ತಂಡಗಳು ಐದು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಮಾಜಿ ಸಂಸದ ವಿಜಯಸಾಯಿ ರೆಡ್ಡಿ ಆಗ್ರಹಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *