Breaking News

ಎಬಿವಿಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯರನ್ನ ಎಳೆದಾಡಿದ ಪೊಲೀಸರು: ಪ್ರಶ್ನಿಸಿದ ಮಾಧ್ಯಮದವರ ಮೇಲೆಯೇ ದರ್ಪ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆ ಮೌರ್ಯ ವೃತ್ತದಿಂದ ವಿಧಾನಸೌಧದವರೆಗೂ ಸಾಗಲು ಯತ್ನಿಸಿದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನಾಕಾರರನ್ನು ಬಸ್‌ಗಳಿಗೆ ಹತ್ತಿಸುವಾಗ ಮಹಿಳಾ ಸಿಬ್ಬಂದಿ ಇಲ್ಲದೆ ಪುರುಷ ಪೊಲೀಸರೇ ವಿದ್ಯಾರ್ಥಿನಿಯರನ್ನು ಎಳೆದಾಡಿದ್ದಾರೆ. ಇದನ್ನು ಮಾಧ್ಯಮಗಳ ವರದಿಗಾರರು ಪ್ರಶ್ನಿಸಿದಾಗ ಪೊಲೀಸರು ಉದ್ಧಟತನದಿಂದ ವರ್ತಿಸಿದ್ದು, ಕ್ಯಾಮರಾಗಳನ್ನು ತಡೆಯಲು ಪ್ರಯತ್ನಿಸಿದ್ದಾರೆ. ಅಲ್ಲದೆ ಮಾಧ್ಯಮಗಳ ಸಿಬ್ಬಂದಿಯ ಜೊತೆಗೆ ಏಕವಚನದಲ್ಲಿ ಮಾತನಾಡಿ ದರ್ಪ ಮೆರೆದಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *