ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಪ್ರಾಂಶುಪಾಲ ವೈ. ಚಿನ್ಮಯಾನಂದ ಮೂರ್ತಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹4 ಲಕ್ಷ ದಂಡ ವಿಧಿಸಿದೆ. 2022ರಲ್ಲಿ ಕಟ್ಟೇರಿ ಗ್ರಾಮದ ವಸತಿ ನಿಲಯದಲ್ಲಿ ಪ್ರಾಂಶುಪಾಲನಾಗಿದ್ದ ವೇಳೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಡಿ ಕೆ.ಆರ್. ಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಧೀಶೆ ಮಂಜುಳಾ ಇಟಗಿ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದರು. ಚಿನ್ಮಯಾನಂದ ಮೂರ್ತಿ ಚಾಮರಾಜನಗರದ DIETನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷೆ ಪ್ರಕಟವಾದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

