ಬೆಂಗಳೂರು ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸಿ ಹೊರರಾಜ್ಯದ ಒಬ್ಬರು ಸೇರಿದಂತೆ 10 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ ₹15.94 ಕೋಟಿ ಮೌಲ್ಯದ ಎಂಡಿಎಂಎ, ಗಾಂಜಾ, ಹೈಡ್ರೋಗಾಂಜಾ ಹಾಗೂ ಹಶೀಶ್ ಆಯಿಲ್ ವಶಪಡಿಸಿಕೊಳ್ಳಲಾಗಿದೆ. ಹೆಬ್ಬಾಳ, ಯಶವಂತಪುರ, ಎಚ್‌ಎಎಲ್, ವೈಟ್‌ಫೀಲ್ಡ್ ಹಾಗೂ ಯಲಹಂಕ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ಬಂಧಿತರು ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಪೊಲೀಸರು ₹15.32 ಕೋಟಿ ಮೌಲ್ಯದ 7 ಕೆಜಿ 660 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದು, ಉಳಿದ ಠಾಣೆಗಳ ಪೊಲೀಸರು ಗಾಂಜಾ, ಹೈಡ್ರೋಗಾಂಜಾ ಹಾಗೂ ಹಶೀಶ್ ಆಯಿಲ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

