ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ನಡೆದ ಮೆರವಣಿಗೆ ವೇಳೆ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರ ಕೈಯಲ್ಲಿದ್ದ ಉಂಗುರ ಕದಿಯಲು ಕಳ್ಳರು ಯತ್ನಿಸಿದ ಘಟನೆ ನಡೆದಿದೆ. ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಆಗಮಿಸಿದ್ದ ಅಜಯ್ ಸಿಂಗ್ ಅವರನ್ನು ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ, ಹೆಗಲ ಮೇಲೆ ಹೊತ್ತು ಮೆರವಣಿಗೆ ನಡೆಸಿದರು. ಈ ವೇಳೆ ಜನದಟ್ಟಣೆಯ ನಡುವೆ ದುಷ್ಕರ್ಮಿಯೊಬ್ಬರು ಉಂಗುರ ಕದಿಯಲು ಯತ್ನಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಸಚಿವರು ಕೂಡಲೇ ಕೈಯನ್ನು ಹಿಂದಕ್ಕೆ ಎತ್ತಿಕೊಂಡಿದ್ದಾರೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

