Breaking News

ಜಮೀನಿನ ಖಾತೆ ಮಾಡಿಕೊಡಲು ₹6.50 ಲಕ್ಷ ಲಂಚಕ್ಕೆ ಬೇಡಿಕೆ: ಗ್ರಾಮ ಲೆಕ್ಕಿಗನ ಬಂಧನ

ಚಿಕ್ಕಬಳ್ಳಾಪುರ: ಜಮೀನಿನ ಖಾತೆ ಮಾಡಿಕೊಡಲು ₹6.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ₹3 ಲಕ್ಷ ಮುಂಗಡ ಪಡೆಯುತ್ತಿದ್ದ ವೇಳೆ ಜಂಗಮಕೋಟೆ ಹೋಬಳಿಯ ನಾಡಕಚೇರಿಯ ಗ್ರಾಮ ಲೆಕ್ಕಿಗ ಮೋಹನ್ ಕುಮಾರ್ ಸಿ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊಸಪೇಟೆ ಗ್ರಾಮದ 14 ಗುಂಟೆ ಜಮೀನಿನ ಖಾತೆಗಾಗಿ ರೈತ ಬೈರೇಗೌಡ ಅವರನ್ನು ಸಂಪರ್ಕಿಸಿದ್ದರು. ಮೊದಲು ₹7 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಲೆಕ್ಕಿಗ, ಬಳಿಕ ₹6.50 ಲಕ್ಷಕ್ಕೆ ವ್ಯವಹಾರ ಕುದುರಿಸಿದ್ದ ಎನ್ನಲಾಗಿದೆ. ಈ ಕುರಿತು ಬೈರೇಗೌಡ ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಂಗಳವಾರ ನಾಡಕಚೇರಿಯಲ್ಲೇ ₹3 ಲಕ್ಷ ಮುಂಗಡ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೋಹನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿ ಆಂಟನಿ ಜಾನ್, ಡಿವೈಎಸ್‌ಪಿ ವೀರೇಂದ್ರ ಕುಮಾರ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *