Breaking News

ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ದೋಖಾ: ಕೇರಳದಲ್ಲಿ ಸಿಕ್ಕಿಬಿದ್ರು ತಾಯಿ, ಮಗ!

ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ ಮೂಲಕ ಮದುವೆ ಸಂಬಂಧ ಹುಡುಕುತ್ತಿದ್ದ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ತಾಯಿ-ಮಗನನ್ನು ಆಡುಗೋಡಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಡಾ. ಪ್ರದೀಪ್ ಜೋಸೆಫ್ ಮತ್ತು ಕಲಾವತಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿಗಳು ಶ್ರೀಮಂತರಂತೆ ಬಿಂಬಿಸಿಕೊಂಡು ವಂಚನೆ ನಡೆಸುತ್ತಿದ್ದರು. ಮದುವೆ ಮಾತುಕತೆ ಕುದುರಿದ ಬಳಿಕ ತುರ್ತು ಹಣದ ಅಗತ್ಯವಿದೆ ಎಂದು ಹೇಳಿ ವಧುವಿನ ಕುಟುಂಬಗಳಿಂದ ಲಕ್ಷಾಂತರ ರೂಪಾಯಿ ಪಡೆದು ಪರಾರಿಯಾಗುತ್ತಿದ್ದರು. ಬೆಂಗಳೂರಿನ ಕುಟುಂಬವೊಂದರಿಂದ ₹20 ಲಕ್ಷ ವಂಚಿಸಲು ಯತ್ನಿಸಿದ್ದು, ಈಗಾಗಲೇ 10ಕ್ಕೂ ಹೆಚ್ಚು ಮಹಿಳೆಯರಿಗೆ ಇದೇ ರೀತಿಯಲ್ಲಿ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳು ಮೈಸೂರಿನಿಂದ ಕಾರಿನಲ್ಲಿ ಪರಾರಿಯಾಗಿರುವುದನ್ನು ಪತ್ತೆಹಚ್ಚಿ, ತಾಂತ್ರಿಕ ಕಾರ್ಯಾಚರಣೆ ಮೂಲಕ ವಯನಾಡಿನಲ್ಲಿ ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ ಸೈಟ್‌ಗಳಲ್ಲಿ ಸಂಬಂಧ ಹುಡುಕುವವರು ವ್ಯಕ್ತಿಯ ಹಿನ್ನೆಲೆ ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *