Breaking News

ವಿಜಯಪುರದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆ!

ವಿಜಯಪುರ ನಗರದ ಹೊರವಲಯದ ಐತಿಹಾಸಿಕ ಬೂತನಾಳ ಕೆರೆಯಲ್ಲಿ ನಾಲ್ಕು ಮಹಿಳೆಯರು ಹಾಗೂ ಇಬ್ಬರು ಬಾಲಕರ ಸೇರಿದಂತೆ ಒಟ್ಟು ಆರು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆರೆಯಲ್ಲಿ ಇನ್ನಷ್ಟು ಶವಗಳು ಇರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆಯುತ್ತಿದ್ದಾರೆ. ಕೆರೆಗೆ ಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದು, ಆದರ್ಶ ನಗರ ಠಾಣೆ ಪಿಎಸ್‌ಐ ಸೀತಾರಾಮ್, ಹಿರಿಯ ಅಧಿಕಾರಿ ನಾಗರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *