Breaking News

ವಿದ್ಯಾರಣ್ಯಪುರ: ಮಾರಕಾಸ್ತ್ರ ಹಿಡಿದು ಬಡಿದಾಡಿದ 2 ಗುಂಪು

ಬೆಂಗಳೂರು: ವಿದ್ಯಾರಣ್ಯಪುರದಲ್ಲಿ ಸೋಮವಾರ ಎರಡು ಪುಂಡರ ಗುಂಪುಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳನ್ನು ಹಿಡಿದು ಬಡಿದಾಡಿಕೊಂಡಿರುವ ಆರೋಪ ಕೇಳಿ ಬಂದಿದ್ದು, ಸ್ಥಳೀಯರು ಆತಂಕ ಕ್ಕೊಳಗಾಗಿದ್ದಾರೆ. ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದು ಪ್ರತ್ಯಕ್ಷಗೊಂಡ 10ಕ್ಕೂ ಅಧಿಕ ಯುವಕರ 2 ಗುಂಪುಗಳು ಸಾರ್ವಜನಿಕ ಸ್ಥಳದಲ್ಲೇ ಜಗಳ ನಡೆಸಿ ರಂಪಾಟ ಸೃಷ್ಟಿಸಿದ್ದವು. ಇದನ್ನು ಪ್ರಶ್ನಿಸಲು ಬಂದ ಸ್ಥಳೀಯರ ಜೊತೆಗೂ ಜಗಳಕ್ಕೆ ಮುಂದಾದ ಪುಂಡರು, ನಾವು ನಿಮ್ಮ ಮನೆಗೆ ಬಂದು ಗಲಾಟೆ ಮಾಡಲಿಲ್ಲ ಎಂದು ಬೆದರಿಸಿರುವ ಆರೋಪ ಕೇಳಿ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ವಿದ್ಯಾರಣ್ಯಪುರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಪುಂಡರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *