ದಕ್ಷಿಣ ಕನ್ನಡ: ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣದಲ್ಲಿ ಕಡಬ ಕೊಡಿಂಬಾಳದ ಜಯಾನಂದ ಕೆ. (60) ಅಪರಾಧಿ ಎಂದು ಸಾಬೀತಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2020ರಲ್ಲಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ₹3 ಲಕ್ಷ ದಂಡ ಸೇರಿದಂತೆ ಒಟ್ಟು ₹3.05 ಲಕ್ಷ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 2 ವರ್ಷಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

