Breaking News

ಧಾರವಾಡದಲ್ಲಿ ಸಿಲಿಂಡರ್ ಸ್ಪೋಟ

ಧಾರವಾಡ: ಜನ್ನತ್ ನಗರದಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣಗಳು ಹಾಗೂ ಪಾತ್ರೆಗಳು ಛಿದ್ರಗೊಂಡು ರಸ್ತೆಗೆ ಬಿದ್ದಿವೆ. ಸ್ಫೋಟದ ಭೀಕರ ದೃಶ್ಯ ಸಮೀಪದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭಾರೀ ಶಬ್ದ ಹಾಗೂ ಬೆಂಕಿಯ ಜ್ವಾಲೆಗೆ ಸ್ಥಳೀಯರು ಬೆಚ್ಚಿಬಿದ್ದು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಪ್ರಾಥಮಿಕ ತನಿಖೆಯಂತೆ ಗ್ಯಾಸ್ ಸೋರಿಕೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *