Breaking News

ವಾಟ್ಸ್‌ಆಯಪ್ ಸ್ಟೇಟಸ್ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ; ದಂಪತಿ ಪೊಲೀಸ್ ಠಾಣೆಗೆ ಶರಣು

ಬೆಳಗಾವಿ: ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ರಮೇಶ ಹಣಮಂತ ಬಂಡ್ರೋಳಿ (40) ಎಂಬಾತನನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಬಣಪ್ಪ ಒಡೆಯರ (33) ಹಾಗೂ ಆಕೆಯ ಪತಿ ಬಣಪ್ಪ ರಾಮಚಂದ್ರ ಒಡೆಯರ (45) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಮೇಶ, ಲಕ್ಷ್ಮೀ ಜೊತೆಗಿರುವ ಫೋಟೋವನ್ನು ವಾಟ್ಸ್‌ಆಯಪ್ ಸ್ಟೇಟಸ್‌ನಲ್ಲಿ ಹಾಕಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ದಂಪತಿ ಮನೆಯ ಹಿಂಭಾಗದ ಗದ್ದೆಯಲ್ಲಿ ರಮೇಶನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಇಬ್ಬರೂ ಘಟಪ್ರಭಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೊಡಲಿ ಸೇರಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಕೊಲೆಯ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *