Breaking News

ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಯುವಕನ ಮೇಲೆ ಹಲ್ಲೆ, ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪುನೀತ್ ಕೆರೆಹಳ್ಳಿ ಅವರ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಮೆರವಣಿಗೆಯಲ್ಲಿ ಘೋಷಣೆ ಕೂಗಿದ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದಾಗ ಮುರಳಿ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಖಂಡಿಸಿ ಪುನೀತ್ ಕೆರೆಹಳ್ಳಿ ಹಾಗೂ ಬೆಂಬಲಿಗರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಿದ್ದಾರೆ. ಘಟನೆ ಖಂಡಿಸಿ ಹಿಂದೂ ಪರ ಕಾರ್ಯಕರ್ತರು ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *