Breaking News

ಪುತ್ತೂರಲ್ಲಿ ಕಳವಾದ ಓಮ್ನಿ ತಮಿಳುನಾಡಲ್ಲಿ ಆಂಬುಲೆನ್ಸ್ ಆಯ್ತು: ನಾಲ್ವರು ಆರೋಪಿಗಳು ಪೊಲೀಸ್ ಬಲೆಗೆ

ಪುತ್ತೂರು: ಮಾಡ್ನೂರು ಕಾವು ಎಂಬಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ್‌ರಾಜ್ಯ ಕಳ್ಳತನದಲ್ಲಿ ಭಾಗಿಯಾಗಿದ್ದ ಕೇರಳದ ಮೂವರು ಹಾಗೂ ತಮಿಳುನಾಡಿನ ಓರ್ವ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹2.5 ಲಕ್ಷ ಮೌಲ್ಯದ ಓಮ್ನಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ್ದ ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ ಓಮ್ನಿ ಕಾರನ್ನು ಕೇರಳಕ್ಕೆ ಕೊಂಡೊಯ್ದು, ಬಳಿಕ ತಮಿಳುನಾಡಿಗೆ ಮಾರಾಟ ಮಾಡಲಾಗಿತ್ತು. ಅಲ್ಲಿ ಕಾರನ್ನು ಆಂಬುಲೆನ್ಸ್‌ ಆಗಿ ಪರಿವರ್ತಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಹಾಗೂ ವಿದ್ಯಾನಗರ ಠಾಣೆಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಜೂ.19ರಿಂದ 20ರ ನಡುವೆ ಮಾಡ್ನೂರು ಕಾವು ಪ್ರದೇಶದಲ್ಲಿ ಕಾರು ಕಳವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳ ಹಾಗೂ ತಮಿಳುನಾಡಿನಲ್ಲಿ ತನಿಖೆ ನಡೆಸಿ ನಾಲ್ವರನ್ನು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *