ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್
ಉತ್ತರ ಪ್ರದೇಶದ ಬುಲಂದ್ಶಹರ್ ನಗರ ಕೊತ್ವಾಲಿ ವ್ಯಾಪ್ತಿಯ ಬಹಲೀಂಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪತಿಯನ್ನು ಟವೆಲ್ನಿಂದ ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಆರೋಪ ಪತ್ನಿ ಮೇಲಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮನೆಯಲ್ಲೇ ನಡೆದ ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ನಿ ಪ್ರೀತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಪತಿ-ಪತ್ನಿಯ ನಡುವಿನ ಯಾವುದಾದರೂ ವೈಯಕ್ತಿಕ ವಿಚಾರವೇ ಹತ್ಯೆಗೆ ಕಾರಣವಾಯಿತೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

