Breaking News

ಮಂಗಳೂರು: ಸ್ವಂತ ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2019ರ ಅಕ್ಟೋಬರ್ 8ರಂದು ಮೊಬೈಲ್ ಬಳಸುವ ವಿಚಾರಕ್ಕೆ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಜೊತೆ ಜಗಳವಾಡಿದ್ದ ಸ್ಯಾಮ್ಸನ್, ಸುತ್ತಿಗೆಯಿಂದ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಮನೆಯ ಹಿಂಭಾಗದ ಪೊದೆಯಲ್ಲಿ ಬಚ್ಚಿಟ್ಟಿದ್ದ. ಐಪಿಸಿ 304(II) ಅಡಿ 4 ವರ್ಷ ಜೈಲು ಹಾಗೂ ₹10 ಸಾವಿರ ದಂಡ, ಐಪಿಸಿ 201ರಡಿ 1 ವರ್ಷ ಜೈಲು ಹಾಗೂ ₹1 ಸಾವಿರ ದಂಡ ವಿಧಿಸಲಾಗಿದೆ. ತನಿಖೆ ನಡೆಸಿದ ಪೊಲೀಸರು 2020ರಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಆಗಸ್ಟ್ 24, 2026ರಂದು ಶಿಕ್ಷೆ ಪ್ರಕಟಿಸಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *