ಗದಗ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಪುಟ್ಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಅಗಸಿಬಾಗಿಲು (35) ಕೊಲೆಯಾದ ಯುವಕ. ರೇಣುಕಾ ಎಂಬುವರ ಜೊತೆ ಈರಣ್ಣ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಕುಟುಂಬಸ್ಥರು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ, ಈರಣ್ಣ ಮತ್ತೆ ರೇಣುಕಾಗೆ ಸನ್ನೆ ಮಾಡಿದ್ದರಿಂದ ಆಕೆಯ ಪತಿ ಹಾಗೂ ಕುಟುಂಬಸ್ಥರು ಆತನ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಸುರೇಶ್, ಆಂಜನೇಯ ಕಳಸಾಪುರ, ಧರ್ಮಣ್ಣ ಭೋವಿ, ಹನುಮವ್ವ ಹಾಗೂ ರೇಣುಕಾ ಕಳಸಾಪುರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

