Breaking News

ಮಲಗಿದ್ದ ಪತ್ನಿಯ ಕುತ್ತಿಗೆ ಹಿಚುಕಿ ಜೀವ ತೆಗೆದ.. ‘ಹೃದಯಾಘಾತ’ ಎಂದು ಕತೆ ಕಟ್ಟಿದ್ದ ಪತಿ ಲಾಕ್ ಆಗಿದ್ದೇಗೆ?

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ಗಣಪತಿ ಮಂಜುನಾಥ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳನ್ನು ಮಂಗಲಾ ಗಣಪತಿ ನಾಯ್ಕ (27) ಎಂದು ಗುರುತಿಸಲಾಗಿದೆ. ಮದ್ಯದ ಮತ್ತಿನಲ್ಲಿ ಮನೆಗೆ ಬಂದ ಗಣಪತಿ, ಮಲಗಿದ್ದ ಪತ್ನಿಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಪತ್ನಿಗೆ ಹೃದಯಾಘಾತವಾಗಿ ಸಾವಾಗಿದೆ ಎಂದು ನಾಟಕವಾಡಿದ್ದ. ಮಂಗಲಾಳ ಸಹೋದರಿಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ವೇಳೆ ಆರೋಪಿ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *