ಬೆಂಗಳೂರು ಬಸವನಗುಡಿಯ ಕೆಆರ್ ರಸ್ತೆಯಲ್ಲಿ ಈದ್-ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮುರಳಿ ಎಂಬ ಯುವಕನ ಮೇಲೆ ಆಯುಧದಿಂದ ಹಲ್ಲೆ ಮಾಡಲಾಗಿದೆ. ಗಾಯಗೊಂಡಿರುವ ಮುರಳಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂರು ಎಫ್‌ಐಆರ್ ದಾಖಲಾಗಿದ್ದು, ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ, ಗೋಪಿಗೌಡ ಹಾಗೂ ವಿನೋದ್ ನಾಯಕ್ ಮತ್ತು ಅಕಲ್ ಪಾಷಾ, ಅಬೂಬಕರ್ ಸಿದ್ಧಿಕ್, ಸೈಯ್ಯದ್ ಅನಸ್ ಬಂಧಿತರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿ ಅಥವಾ ಪ್ರಚೋದನಕಾರಿ ಚಟುವಟಿಕೆಗಳಿಗೆ ಒಳಗಾಗದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಡಿಸಿಪಿ ವಂಶಿಕೃಷ್ಣ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

