Breaking News

ಮನೆಗಳಲ್ಲಿ ಕಳ್ಳತನ, ಇಬ್ಬರ ಬಂಧನ

ಉಡುಪಿಯಲ್ಲಿ ಬಹುದಿನಗಳಿಂದ ಬೀಗ ಹಾಕಿರುವ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಎಸ್‌. ಆಚಾರಿ (43) ಮತ್ತು ಕೌಶಿಕ್‌ ಪಿ. ಆಚಾರ್ಯ (19) ಬಂಧಿತ ಆರೋಪಿಗಳು. ಆರೋಪಿಗಳು 5 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ಮೊಬೈಲ್‌, ಬೈಕ್‌ ಹಾಗೂ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದೇಶಿ ಕರೆನ್ಸಿ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳು ಆರೋಪಿಗಳಿಂದ ಪತ್ತೆಯಾಗಿವೆ. ಖಚಿತ ಮಾಹಿತಿ ಆಧರಿಸಿ ಪೆರಂಪಳ್ಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಅರುಣ್‌ ಆಚಾರಿ ಈ ಹಿಂದೆ ಪೋಕ್ಸೋ ಪ್ರಕರಣದಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು, 2025ರ ಜುಲೈನಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಎಸ್ಪಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *