Breaking News

ದಿಲ್ಲಿ | ದಲಿತ ಯುವಕನ ಲಾಕಪ್ ಡೆತ್ : 6 ಪೊಲೀಸರ ವಿರುದ್ಧ FIR ದಾಖಲು

ಹೊಸದಿಲ್ಲಿ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಕಸ್ಟಡಿ ಸಾವಿನ ಪ್ರಕರಣದಲ್ಲಿ ಆರು ಪೊಲೀಸರ ವಿರುದ್ಧ ಸಿಬಿ-ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆಕಾಶ್‌ ಪರಿಶಿಷ್ಟ ಜಾತಿಯ ದೇವೇಂದ್ರ ಕುಲ ವೆಳ್ಳಾಲರ್ ಸಮುದಾಯಕ್ಕೆ ಸೇರಿದವನೆಂದು ಪೊಲೀಸರಿಗೆ ತಿಳಿದಿದ್ದರೂ, ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 6ರಂದು ಆಕಾಶ್ ಹಾಗೂ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಮಾರ್ಚ್ 8ರಂದು ಮಧುರೈ ರಾಜಾಜಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಕಾಶ್ ಮೃತಪಟ್ಟಿದ್ದರು. ಇನ್ಸ್‌ಪೆಕ್ಟರ್ ದಿಲೀಪನ್ ಸೇರಿದಂತೆ ಆರು ಪೊಲೀಸರ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪಗಳ ಜೊತೆಗೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ

ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್‌ಎಎಲ್ ಠಾಣೆ …

Leave a Reply

Your email address will not be published. Required fields are marked *