Breaking News

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ತಂದೆ ವಿರುದ್ಧ ಪೋಕ್ಸೋ ದಾಖಲು

ಯಾದಗಿರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಆಕೆಯ ತಂದೆ ಹಾಗೂ ಸಂಬಂಧಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿ ಕೌನ್ಸೆಲಿಂಗ್ ವೇಳೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಿದ್ದಾಳೆ. ಚಿಕ್ಕವಳಿದ್ದಾಗ ತಂದೆ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿ ದೌರ್ಜನ್ಯ ನಡೆಸಿದ್ದಾಗಿ ಬಾಲಕಿ ಆರೋಪಿಸಿದ್ದಾಳೆ. ಬಳಿಕ ಈ ವಿಚಾರ ತಾಯಿಗೆ ತಿಳಿದ ನಂತರ ಬಾಲಕಿ ಹಾಗೂ ಆಕೆಯ ಅಕ್ಕನನ್ನು ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾಗ ಯಾದಗಿರಿ ನಗರದ ಭಾಗ್ಯಂತಿ ಮಠದ ಅರ್ಚಕರೊಬ್ಬರು ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದೂ ಬಾಲಕಿ ಆರೋಪಿಸಿದ್ದಾಳೆ. ಆಕೆಯ ಹೇಳಿಕೆ ಆಧರಿಸಿ BNS ಹಾಗೂ POCSO ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *