ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವೀಂದ್ರಕುಮಾರ ಬೇವಿನಾಳ, ಅವರ ಪತ್ನಿ ರಮಾ ಹಾಗೂ ಸಹೋದರ ಅನಿಲ್‌ಕುಮಾರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿವೇಶನ ನೀಡುವುದಾಗಿ ಹೇಳಿ, ಆಯುಕ್ತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡ ಆರೋಪ ಇವರ ಮೇಲಿದೆ. ರವೀಂದ್ರಕುಮಾರ ಪ್ರಾಧಿಕಾರದಲ್ಲಿ ದಿನಗೂಲಿ ಲೆಕ್ಕಾಧಿಕಾರಿಯಾಗಿ ಹಾಗೂ ಇಎಸ್‌ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣ ದುರ್ಬಳಕೆ ಹಾಗೂ ಅಂದಿನ ಆಯುಕ್ತರ ಸಹಿ ನಕಲು ಮಾಡಿದ ಆರೋಪವೂ ಅವರ ಮೇಲಿದೆ. ಈ ಅಕ್ರಮದ ಕುರಿತು ‘ವಾರ್ತಾಭಾರತಿ’ ಜುಲೈ 24ರಂದು ವರದಿ ಪ್ರಕಟಿಸಿದ ಬಳಿಕ ತನಿಖೆ ಚುರುಕುಗೊಂಡಿತ್ತು. ಆರಂಭದಲ್ಲಿ ಲಕ್ಷಾಂತರ ರೂಪಾಯಿ ಎಂದು ಅಂದಾಜಿಸಿದ್ದ ಅವ್ಯವಹಾರ ಕೋಟ್ಯಂತರ ರೂಪಾಯಿಗೆ ವಿಸ್ತರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

