ಮಂಗಳೂರು: ದೌರ್ಜನ್ಯ ಆರೋಪದಡಿ ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಆರೋಪಿ ನೌಶದ್ ಆಕೆಗೆ ವಾಟ್ಸ್‌ಆ್ಯಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. “ನಿನ್ನ ತಲೆ ತೆಗೀತೀನಿ, ಕೊಲ್ಲದೇ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾಗಿ ಯುವತಿ ಆರೋಪಿಸಿದ್ದಾಳೆ. ನಂದಿನಿ ಎಂಬ ನರ್ಸ್ ನೀಡಿದ ದೂರಿನ ಬಳಿಕವೂ ಹಲವು ದಿನಗಳಾದರೂ ಆರೋಪಿ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಮತ್ತೊಬ್ಬ ನರ್ಸ್ ಆದಿತ್ಯಾ ಬಳಿ ತನ್ನ ಫೋಟೋ, ವಿಡಿಯೋಗಳಿವೆ ಎಂದು ಹೇಳಿಕೊಂಡಿದ್ದು, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ನಡುವೆ ಇಬ್ಬರು ನರ್ಸ್‌ಗಳನ್ನು ಆಸ್ಪತ್ರೆಯಿಂದ ವಜಾಗೊಳಿಸಲಾಗಿದೆ ಎನ್ನಲಾಗಿದೆ. ಆರೋಪಿ ಬಂಧನ ವಿಳಂಬದ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ದೂರವಾಣಿ ಮೂಲಕ ಬೆದರಿಕೆ ಪ್ರಕರಣದಲ್ಲಿ ತಕ್ಷಣ ಬಂಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದಿದ್ದಾರೆ. ಬಳಿಕ ಆರೋಪಿ ನೌಶದ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

