Breaking News

ಮನೆಯಲ್ಲಿ ಮಾತನಾಡುತ್ತಾ ಕುಳಿತಿದ್ದ ಮಹಿಳೆಯರು: ವೇಶ್ಯಾವಾಟಿಕೆ ನಡೆಸುತ್ತಿದ್ದೀರ, ನಾವು ಪೊಲೀಸರು ಎಂದು ಮನೆಗೆ ನುಗ್ಗಿದ ಕಳ್ಳರು!

ಮೈಸೂರು: ಪೊಲೀಸರು ಎಂದು ಹೇಳಿಕೊಂಡು ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು, ಮಹಿಳೆಯರಿಗೆ ಬೆದರಿಕೆ ಹಾಕಿ ಮೂರು ಮೊಬೈಲ್‌ಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶಾರದಾದೇವಿನಗರದಲ್ಲಿ ನಡೆದಿದೆ. ಆಗಸ್ಟ್ 25ರಂದು ಸವಿತಾ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಸವಿತಾ ಅವರು ಸ್ನೇಹಿತೆಯರಾದ ಕೆಂಡಮ್ಮ ಹಾಗೂ ಸರಸ್ವತಿ ಜೊತೆ ಮನೆಯಲ್ಲಿದ್ದಾಗ ಮುಖಕ್ಕೆ ಮಾಸ್ಕ್ ಧರಿಸಿದ್ದ ಐವರು ಏಕಾಏಕಿ ಒಳನುಗ್ಗಿದ್ದಾರೆ. ತಾವು ಸರಸ್ವತಿಪುರಂ ಠಾಣೆಯ ಪೊಲೀಸರು ಎಂದು ಹೇಳಿ, ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಬೆದರಿಸಿ ₹2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಲು ಸಾಧ್ಯವಿಲ್ಲ ಎಂದು ಸವಿತಾ ಹೇಳಿದಾಗ, ಮೂವರು ಮಹಿಳೆಯರ ಬಳಿಯಿದ್ದ ಮೂರು ಮೊಬೈಲ್‌ಗಳನ್ನು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *