ಕಲಬುರಗಿ: ಸ್ವಂತ 4 ವರ್ಷದ ಮಗನನ್ನು ತಂದೆಯೇ ಜಲಾಶಯಕ್ಕೆ ಎಸೆದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಬಾಲಕನನ್ನು ಗುಂಡೇಶ್ ಎಂದು ಗುರುತಿಸಲಾಗಿದೆ. ಮಗನ ಜೊತೆ ಆಟವಾಡುತ್ತಿದ್ದ ತಂದೆ ಸೋಮರಾವ್ ಹೂಗಾರ್, ಬಳಿಕ ಯಾರಿಗೂ ತಿಳಿಸದೆ ಮಗುವನ್ನು ಕರೆದುಕೊಂಡು ಹೋಗಿ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ ಎಂದು ತಾಯಿ ಕಲ್ಪನಾ ಆರೋಪಿಸಿದ್ದಾರೆ. ಈ ಕುರಿತು ಅವರು ಚಿಂಚೋಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಲಾಶಯದಲ್ಲಿ ಶೋಧ ನಡೆಸಿದಾಗ ಬಾಲಕನ ಶವ ಪತ್ತೆಯಾಗಿದೆ. ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

