Breaking News

ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿ ಸರಗಳ್ಳತನ : ಇಬ್ಬರು ನಟೋರಿಯಸ್ ಕಳ್ಳರು ಅರೆಸ್ಟ್!

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಇಬ್ಬರು ನಟೋರಿಯಸ್ ಸರಗಳ್ಳರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಪ್ರೇಮ್ ಕುಮಾರ್ ಹಾಗೂ ಯಶವಂತ್ ಬಂಧಿತ ಆರೋಪಿಗಳು. ಆಗಸ್ಟ್ 12ರಂದು ದೊಡ್ಡಬಿದರಕಲ್ಲು ಬಳಿ ಒಂಟಿಯಾಗಿ ತೆರಳುತ್ತಿದ್ದ ವಿಜಯಮ್ಮ ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕುತ್ತಿಗೆ ಹಿಡಿದು ಕೆಳಗೆ ಬೀಳಿಸಿ ಚಿನ್ನದ ಸರ ಕದ್ದು ಪರಾರಿಯಾಗಿದ್ದರು.bಆರೋಪಿಗಳು ಅಪ್ರಾಪ್ತರಾಗಿದ್ದಾಗಲೇ ಬೈಕ್ ಕಳ್ಳತನಕ್ಕೆ ಇಳಿದಿದ್ದು, ಈ ಹಿಂದೆ ಸುಮಾರು 8 ವಾಹನಗಳನ್ನು ಕದ್ದಿದ್ದರು ಎನ್ನಲಾಗಿದೆ. ಬಳಿಕ ರಿಮ್ಯಾಂಡ್ ಹೋಮ್‌ನಿಂದ ಬಿಡುಗಡೆಯಾದ ನಂತರ ವಯಸ್ಕರಾದ ಮೇಲೆ ಸರಗಳ್ಳತನ ಮುಂದುವರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೀಣ್ಯ ಪೊಲೀಸರು ಪ್ರೇಮ್ ಕುಮಾರ್ ಹಾಗೂ ಯಶವಂತ್‌ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಆರೋಪಿಗಳ ಹಿಂದಿನ ಕೃತ್ಯಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *