Breaking News

ಧಾರವಾಡದಲ್ಲಿ ಘೋರ ದುರಂತ : ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ್ ಗ್ರಾಮದಲ್ಲಿ ನಡೆದಿದೆ. ಮೃತ ಪತ್ನಿಯನ್ನು ಸಲ್ಮಾ (22) ಎಂದು ಗುರುತಿಸಲಾಗಿದ್ದು, ಪತಿ ಮೌಲಾಸಾಬ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಅನೈತಿಕ ಸಂಬಂಧದ ಶಂಕೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಮೌಲಾಸಾಬ್ ಚಾಕುವಿನಿಂದ ಸಲ್ಮಾಗೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಹಾಗೂ ಇತರ ವಿವರಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *