ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಿದ್ದೇಶ್ವರ ಪಾರ್ಕ್ ಬಳಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಏಕಾಏಕಿ ದಾಳಿ ನಡೆಸಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದ ಆರೋಪಿಗಳು ಮಾರಕಾಸ್ತ್ರಗಳಿಂದ ಸಾಯುವವರೆಗೂ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮೃತ ಯುವಕನ ಗುರುತು ಹಾಗೂ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷವೇ ಕಾರಣವೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ನಡೆದ ಬರ್ಬರ ಹತ್ಯೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

