Breaking News

ಧಾರವಾಡ: ಮಗುವಿನ ಎದುರೆ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

ಧಾರವಾಡ: ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಮೌಲಾಸಾಬ್ (28) ತನ್ನ ಪತ್ನಿ ಸಲ್ಮಾ (21) ಅವರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿಗೆ ಒಂದೂವರೆ ವರ್ಷದ ಮಗು ಇದ್ದು, ಮಗುವಿನ ಎದುರೇ ಕೃತ್ಯ ನಡೆದಿದೆ ಎನ್ನಲಾಗಿದೆ. ತಡರಾತ್ರಿವರೆಗೂ ಮನೆಯಿಂದ ಯಾವುದೇ ಶಬ್ದ ಕೇಳದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಲ್ಮಾ ಕುಟುಂಬಸ್ಥರು ಸ್ಥಳಕ್ಕೆ ಬರುತ್ತಿದ್ದಂತೆಯೇ ಎರಡೂ ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ಅತ್ತೆ-ಮಾವನ ಕಿರುಕುಳದಿಂದ ಸಲ್ಮಾ ತೊಂದರೆ ಅನುಭವಿಸುತ್ತಿದ್ದಳು ಎಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಾಹಿತಿ ತಿಳಿದು ಎಸ್‌ಪಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *