Breaking News

ಯುವಕನಿಂದ ಮಾನಸಿಕ ಕಿರುಕುಳ, ಜೀವಬೆದರಿಕೆ; ಕಾನೂನು ಕ್ರಮಕ್ಕೆ ಸಂತ್ರಸ್ತ ಯುವತಿ ಆಗ್ರಹ

ಬೆಂಗಳೂರು: ಯುವತಿಯರಿಗೆ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಜೀವ ಬೆದರಿಕೆ ನೀಡಿದ ಆರೋಪದಡಿ ಮೊಹಮ್ಮದ್ ನೌಷಾದ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಠಿಣ ಕ್ರಮಕ್ಕೆ ಸಂತ್ರಸ್ತ ಯುವತಿ ಆಗ್ರಹಿಸಿದ್ದಾಳೆ. ದೂರು ನೀಡಿದ ಬಳಿಕ ನೌಷಾದ್ ಕಡೆಯವರು ಆಸ್ಪತ್ರೆಯಲ್ಲಿ ಅವಾಚ್ಯವಾಗಿ ನಿಂದಿಸಿದ್ದು, ಮ್ಯಾನೇಜರ್ ಕೆಲಸದಿಂದ ತೆಗೆದಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ನೌಷಾದ್ ಗುರುವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *