Breaking News

ಹುಳಿಯಾರು: ಕಾರುಗಳ ಮುಖಾಮುಖಿ, ಮಗು ಸೇರಿ ನಾಲ್ವರ ದುರಂತ ಸಾವು

ಚಿಕ್ಕನಾಯಕನಹಳ್ಳಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ 3 ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ತೂಬರೇಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ. ಮೃತರನ್ನು ವಿವೇಕ್ (31), ಅನಿಲ್ (32), ದಾವುದ್ ಪಾಷಾ (45) ಹಾಗೂ 3 ವರ್ಷದ ಅನಮ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಅನಿಲ್, ಯಾಸ್ಮಿನ್ ತಾಜ್, ಸೀಮಾ ಹಾಗೂ ಆಸ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *