ಮಾಗಡಿ: ಸರಣಿ ಕಳವು ಪ್ರಕರಣ ಭೇದಿಸಿರುವ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ₹20.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 12 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆಗಸ್ಟ್ 7ರಂದು ಗೇರಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿದ್ದ ಕಳ್ಳರು, ಮಲಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಅದೇ ದಿನ ದೇವಸ್ಥಾನ ಹಾಗೂ ಬೈಚಾಪುರ ಗ್ರಾಮದ ಮನೆಯಲ್ಲೂ ಕಳವು ನಡೆದಿತ್ತು. ಆರೋಪಿಗಳ ವಿಚಾರಣೆ ವೇಳೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. 78 ಗ್ರಾಂ ಚಿನ್ನ, 2 ಕೆಜಿ 558 ಗ್ರಾಂ ಬೆಳ್ಳಿ, 6 ದ್ವಿಚಕ್ರ ವಾಹನ, ಹಿತ್ತಾಳೆ ಸಾಮಗ್ರಿಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಬೈಕ್ ಜಪ್ತಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

