ಶಿರಸಿ: ಸಿದ್ದಾಪುರದಿಂದ ಕೊಲ್ಲಾಪುರಕ್ಕೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ನಿಲೇಕಣಿ ಬಳಿ ಲಾರಿ ತಡೆದು ಪರಿಶೀಲಿಸಿದಾಗ 50 ಕೆ.ಜಿ. ತೂಕದ 473 ಚೀಲ ಪಡಿತರ ಅಕ್ಕಿ ಪತ್ತೆಯಾಗಿದೆ. ಅಕ್ಕಿ ಸಾಗಾಟಕ್ಕೆ ಬಳಸಿದ್ದ 10 ಚಕ್ರದ ಲಾರಿ ಹಾಗೂ ಚಾಲಕನನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿರಸಿ ತಹಶೀಲ್ದಾರ್ ಪಟ್ಟರಾಜ ಗೌಡ ಹಾಗೂ ನಗರ ಠಾಣೆ ಪಿಎಸ್‌ಐ ನರಸಿಂಹಲು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

