ಗದಗ, ಆ.29: ISROದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್‌ನನ್ನು ಗದಗ ಶಹರ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಮೋಸಹೋದವರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.bಆರೋಪಿ ಇನ್‌ಸ್ಟಾಗ್ರಾಂನಲ್ಲಿ ನಕಲಿ ಖಾತೆ ಸೃಷ್ಟಿಸಿ, ತಾನು ISRO ಉದ್ಯೋಗಿ ಎಂದು ಪರಿಚಯಿಸಿಕೊಂಡು ಜಾಬ್ ಆಫರ್ ನೀಡುವುದಾಗಿ ನಂಬಿಸಿ ಫೋನ್‌ಪೇ ಮೂಲಕ ಹಣ ಪಡೆದುಕೊಳ್ಳುತ್ತಿದ್ದ. 30ಕ್ಕೂ ಹೆಚ್ಚು ಮಂದಿ ಈತನಿಂದ ಮೋಸಹೋಗಿದ್ದಾರೆ ಎನ್ನಲಾಗಿದೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಹಾಗೂ ಬ್ಯಾಗ್‌ನಲ್ಲಿ ನಿರೋಧ್ ಪ್ಯಾಕೆಟ್‌ಗಳು ಪತ್ತೆಯಾಗಿದ್ದು, ಉದ್ಯೋಗದ ನೆಪದಲ್ಲಿ ಯುವತಿಯರನ್ನೂ ಬಲೆಗೆ ಬೀಳಿಸಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಲ ತೀರಿಸಲು ವಂಚನೆ ಮಾಡಿದ್ದಾಗಿ ಆರೋಪಿ ಹೇಳಿಕೊಂಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

