Breaking News

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಸ್ಟಂಟ್: ಪೊಲೀಸರ ಬಲೆಗೆ ಬಿದ್ದ ಸವಾರರು, ಮುಂದೆ ಕಾದಿದೆ ಕಠಿಣ ಶಿಕ್ಷೆ!

ಮುಂಬೈ: ಕೋಸ್ಟಲ್ ರೋಡ್ ಸುರಂಗದಲ್ಲಿ ಅಪಾಯಕಾರಿ ಸ್ಟಂಟ್ ಮಾಡಿದ 14 ವಾಹನಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಾಹನಗಳ ಸಾಲು ಈದ್ ಮಿಲಾದ್ ಮೆರವಣಿಗೆಗೆ ಸಂಬಂಧಿಸಿದ್ದು ಎನ್ನಲಾಗಿದೆ. CCTV ಹಾಗೂ ANPR ಕ್ಯಾಮೆರಾಗಳ ದೃಶ್ಯ ಆಧರಿಸಿ ವಾಹನಗಳ ನಂಬರ್ ಪ್ಲೇಟ್ ಗುರುತಿಸಿ ಮಾಲೀಕರಿಗೆ ನೋಟಿಸ್ ಹಾಗೂ ಇ-ಚಲನ್ ಕಳುಹಿಸಲಾಗಿದೆ. ವಿಚಾರಣೆ ಬಳಿಕ ಇನ್ನಷ್ಟು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಅಪಾಯಕಾರಿ ಚಾಲನೆಗೆ ಮೋಟಾರು ವಾಹನ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸುರಂಗದಲ್ಲಿ ಸ್ಟಂಟ್ ಮಾಡುವುದು ಅಪಾಯಕಾರಿ ಹಿನ್ನೆಲೆ, ಸಂಚಾರ ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *