Breaking News

ಪೊಲೀಸರಿಗೆ ಹೆದರಿ ಓಡುವಾಗ ಘೋರ ದುರಂತ.. ಅನ್ಯಾಯವಾಗಿ ಪ್ರಾಣಬಿಟ್ಟ ರಮೇಶ್‌

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪ ಕಾಫಿ ತೋಟದಲ್ಲಿ ನಡೆಯುತ್ತಿದ್ದ ಅಂದರ್-ಬಾಹರ್ ಜೂಜಾಟದ ಅಡ್ಡೆ ಮೇಲೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡು ಜೂಜಾಟದಲ್ಲಿ ತೊಡಗಿದ್ದವರು ಓಡಿಹೋಗಲು ಯತ್ನಿಸಿದ್ದಾರೆ. ಈ ವೇಳೆ ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಎಂಬಾತ ಕಾಡಿನಲ್ಲಿ ಓಡುವಾಗ ಜಾರಿ ಬಿದ್ದು, ತಲೆ ಬಂಡೆಗೆ ಬಲವಾಗಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ 9 ಮಂದಿಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಮೇಶ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಕಾಫಿ ತೋಟದ ಅರಣ್ಯ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *