Breaking News

ಡೆತ್ ನೋಟ್ ಬರೆದಿಟ್ಟು ಯುವಕ ನೀರುಪಾಲು; ಐವರ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು: ನಂಜನಗೂಡು ತಾಲೂಕಿನ ಹರಗನಪುರ ಗ್ರಾಮದ ಗುರುಮೂರ್ತಿ (24) ಎಂಬ ಯುವಕ ಡೆತ್‌ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆ ಮುಂದೆ ಕೆಲವರು ಗಲಾಟೆ ಮಾಡಿ ಅವಮಾನಿಸಿದ್ದರಿಂದ ಮನನೊಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಗುರುಮೂರ್ತಿ ಡೆತ್‌ನೋಟ್‌ನಲ್ಲಿ ಶ್ರವಣ, ಅಭಿ ಸೇರಿದಂತೆ ಐವರ ವಿರುದ್ಧ ಆರೋಪ ಮಾಡಿದ್ದಾನೆ. ಗಲಾಟೆ ಹಾಗೂ ಅವಮಾನವೇ ತನ್ನ ಸಾವಿಗೆ ಕಾರಣ ಎಂದು ಬರೆದಿರುವುದಾಗಿ ತಿಳಿದುಬಂದಿದೆ. ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕೆರೆಯಿಂದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಶ್ರವಣ, ಅಭಿ, ಸೋಮಶೇಖರ, ಪ್ರದೀಪ್ ಹಾಗೂ ಸೋಮು ವಿರುದ್ಧ ದೂರು ನೀಡಲಾಗಿದ್ದು, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *